ಭಾರತ, ಮಾರ್ಚ್ 3 -- OTT Comedy Movie: ತಮಿಳು ನಟ ಮಣಿಕಂದನ್ ನಾಯಕನಾಗಿ ನಟಿಸಿದ ಕುಟುಂಬಸ್ಥಾನ್ ಸಿನಿಮಾವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಸಂದರ್ಭದಲ್ಲಿ ದೊಡ್ಡ ಹಿಟ್‌ ಆಗಿತ್ತು. ಈ ತಮಿಳು ಚಿತ್ರ ಜನವರಿ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಈ ಸಿನಿಮಾ ಒಟಿಟಿಯಲ್ಲಿ ಯಾವಾಗ ರಿಲೀಸ್ ಆಗುತ್ತೆ ಅಂತ ನೋಡಲು ಅನೇಕರು ಕಾಯುತ್ತಿದ್ದರು. ಇದೀಗ ಈ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕ ಪ್ರಕಟವಾಗಿದೆ.

ಕುಟುಂಬಸ್ಥಾನ್ ಸಿನಿಮಾವು ಮಾರ್ಚ್ 7 ರಂದು ಜೀ5 ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್‌ ಆಗಲಿದೆ. ಈ ಕುರಿತು ಇಂದು (ಮಾರ್ಚ್ 3) ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ. ಕನ್ನಡಿಗರು ಈ ತಮಿಳು ಸಿನಿಮಾವನ್ನು ಕನ್ನಡದಲ್ಲಿಯೇ ನೋಡಬಹುದು. ಏಕೆಂದರೆ, ಈ ಚಿತ್ರ ತಮಿಳು, ತೆಲುಗು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿರುತ್ತದೆ. ಈ ಚಿತ್ರ ತಮಿಳಿನಲ್ಲಿ ಮಾತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಇದು ಮಾರ್ಚ್ 7 ರಂದು ಜೀ5 ಒಟಿಟಿಯಲ್ಲಿ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ....