ಭಾರತ, ಜನವರಿ 28 -- OTT Updates February: 2024ರ ಅಂತ್ಯದಲ್ಲಿ ಬಿಡುಗಡೆಯಾದ ಕೆಲ ಚಿತ್ರಗಳು ಒಟಿಟಿ ಪ್ರವೇಶಿಸಲು ಸಿದ್ಧವಾಗಿವೆ. ಜನವರಿ ತಿಂಗಳಿನಲ್ಲಿ ಕೆಲವು ಸಣ್ಣ ಸಿನಿಮಾಗಳು ಮಾತ್ರ ಒಟಿಟಿಯಲ್ಲಿ ಬಿಡುಗಡೆಯಾಗಿದ್ದವು. ಆದರೆ, ಈ ತಿಂಗಳಿನಲ್ಲಿ ಅಂದರೆ ಫೆಬ್ರವರಿಯಲ್ಲಿ ಬಿಗ್‌ ಬಜೆಟ್‌ ಸಿನಿಮಾಗಳನ್ನೂ ಸಹ ನೀವು ಒಟಿಟಿಯಲ್ಲಿ ವೀಕ್ಷಿಸಬಹುದು. ಆ ಸಿನಿಮಾಗಳು ಯಾವವು? ಎಂಬುದನ್ನು ನಾವಿಲ್ಲಿ ನೀಡಿದ್ದೇವೆ ಗಮನಿಸಿ. ಬ್ಲಾಕ್ಬಸ್ಟರ್ ಸಿನಿಮಾ 'ಪುಷ್ಪ 2 ದಿ ರೂಲ್‌' ಸೇರಿದಂತೆ ಸಂಕ್ರಾಂತಿ ಸಮಯದಲ್ಲಿ ಬಿಡುಗಡೆಯಾದ ಚಿತ್ರಗಳೂ ಸಹ ಮುಂದಿನ ತಿಂಗಳು ಒಟಿಟಿಗೆ ಪಾದಾರ್ಪಣೆ ಮಾಡಲಿವೆ.

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ 'ಪುಷ್ಪ 2: ದಿ ರೂಲ್' ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾ ಹಲವು ದಾಖಲೆಗಳನ್ನು ನಿರ್ಮಿಸಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರವು ಕಳೆದ ವರ್ಷ ಡಿಸೆಂಬರ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ....