Bangalore, ಏಪ್ರಿಲ್ 12 -- Police News: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯಗಳ ವಿಚಾರಣೆಗೆ ಕರ್ನಾಟಕ ಸರ್ಕಾರ ಪ್ರತ್ಯೇಕ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸುತ್ತಿದೆ. ಡಾ.ಅಂಬೇಡ್ಕರ್‌ ಜಯಂತಿ ಆಚರಿಸುವ ಏಪ್ರಿಲ್‌ 14 ರಂದು ಬೆಂಗಳೂರು ನಗರವೂ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 33 ವಿಶೇಷ ಪೊಲೀಸ್‌ ಠಾಣೆಗಳು ಆರಂಭವಾಗಲಿವೆ. ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲೆ ದಾಖಲಾಗುವ ಪ್ರಕರಣಗಳಲ್ಲಿ ಶಿಕ್ಷೆ ವಿಧಿಸುವ ಪ್ರಮಾಣ ಅತ್ಯಂತ ಕಡಿಮೆ ಇದ್ದು, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಈ ಪೊಲೀಸ್‌ ಠಾಣೆಗಳನ್ನು ಆರಂಭಿಸುತ್ತಿದೆ. 2023-24 ರ ಬಜೆಟ್‌ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಆರ್‌ಇ ಕಾರ್ಯವೈಖರಿಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲಾಗುವುದು ಎಂದು ಘೋಷಿಸಿದ್ದರು. ಈ ಘೋಷಣೆ ಮಾಡಿದ ಎರಡು ವರ್ಷಗಳ ನಂತರ ಈ ಯೋಜನೆ ಜಾರಿಯಾಗುತ್ತದೆ. ದಲಿತರ ಹಕ್ಕುಗಳನ್ನು ರಕ್ಷಿಸಲು ಈ ಯೋಜನೆಯನ್ನು ಜಾರಿಗೊಳಿಸುತ್ತಿರುವುದು ಐತಿಹಾಸಿಕ ನಿರ್...