ಭಾರತ, ಜನವರಿ 28 -- ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು (ಜನವರಿ 28 ಮಂಗಳವಾರ) ಹಾಗೂ ನಾಳೆ (ಜನವರಿ 29 ಬುಧವಾರ) ವಿದ್ಯುತ್‌ ವ್ಯತ್ಯಯವಾಗಲಿದೆ. ವಿದ್ಯುತ್ ಪೂರೈಕೆಯಲ್ಲಿ ಗಂಟೆಗಳ ಕಾಲ ವ್ಯತ್ಯಯವಾಗಲಿದ್ದು, ಅಗತ್ಯ ಕೆಲಸಗಳನ್ನು ಯೋಜಿಸಿಕೊಂಡು ಮಾಡುವುದು ಉತ್ತಮ. 66/11ಕೆವಿ ಬಿಎಂಟಿಸಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಯುಬಿ ಸಿಟಿ, ಐಟಿಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆಸಿ ರೋಡ್, ಶಾಂತಿನಗರ, ಬಿಟಿಎಸ್ ರೋಡ್, ರಿಚ್ಮಂಡ್ ಸರ್ಕಲ್, ರೆಸಿಡೆನೆಸ್ಸಿ ರೋಡ್, ಸುಧಾಮನಗರ, ಕೆಎಚ್ ರೋಡ್,‌ ವಿಲ್ಸನ್ ಗಾರ್ಡನ್, ಡಬಲ್ ರೋಡ್, ಲಾಲ್‌ಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶ.

66/11ಕೆವಿ ಅರೇಹಳ್ಳಿ ಉಪಕೇಂದ್ರದ ಅರೇಹಳ್ಳಿ, ಇಟ್ಟಮಡು, ಎಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿಜ...