ಭಾರತ, ಮಾರ್ಚ್ 20 -- Power Tariff Hike: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್‌ 2024ರ ಮಾರ್ಚ್‌ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕೆಇಆರ್‌ಸಿ ದರ ಹೆಚ್ಚಳದ ಆದೇಶ ಹೊರಡಿಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮ ಸರ್ಕಾರ ವಿದ್ಯುತ್‌ ದರವನ್ನು ಏರಿಸಿಲ್ಲ. ಯೂನಿಟ್‌ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್‌ ದರದ ಏರಿಕೆ ಅಲ್ಲ. ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್‌ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆಯನ್ನು ಏರಿಸಿದೆ. ಎಂದು‌ ಸ್ಪಷ್ಟಪಡಿಸಿದರು.

"ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ‌ಹಾಗೂ 5 ಎಸ್ಕಾಂಗಳನ್ನು ರಚಿಸಿದ...