Mysuru, ಮಾರ್ಚ್ 8 -- ಮೈಸೂರು: ಮೈಸೂರು ಭಾಗದಲ್ಲಿ ವಿದ್ಯುತ್ ಕಳ್ಳತನದ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿವೆ. ಅದರಲ್ಲೂ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು ಒಂದೇ ವರ್ಷದಲ್ಲಿ 6.36 ಕೋಟಿ ರುಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿದ್ದಾರೆ. ಸೆಸ್ಕ್ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸೆಸ್ಕ್ ಜಾಗೃತದಳದ ಪೊಲೀಸ್ ಅಧೀಕ್ಷಕರಾದ ಸವಿತಾ ಹೂಗಾರ ಅವರ ನೇತೃತ್ವದಲ್ಲಿ ಜಾಗೃತದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸೆಸ್ಕ್ ವಿಭಾಗ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಆ ಮೂಲಕ ಅಕ್ರಮವಾಗಿ ವಿದ್ಯುತ್ ಕಳ್ಳತನ, ವಿದ್ಯುತ್ ದುರುಪಯೋಗ ಮಾಡಿದವರ ವಿರುದ್ಧ ಕ್ರಮಕೈಗೊಂಡು, ಪ್ರಕರಣಗಳನ್ನು ದಾಖಲಿಸಲಾಗಿದೆ.
ಸೆಸ್ಕ್ ಜಾಗೃತದಳ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್...
Click here to read full article from source
To read the full article or to get the complete feed from this publication, please
Contact Us.