Bangalore, ಮಾರ್ಚ್ 27 -- Puc Results 2025: ಕರ್ನಾಟಕದಲ್ಲಿ 2024-25 ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ಣಗೊಂಡಿದ್ದು, ಮೌಲ್ಯಮಾಪನ ಕಾರ್ಯ ಆರಂಭಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿಯು ಪಿಯುಸಿ ಪರೀಕ್ಷೆಯನ್ನು ಮಾರ್ಚ್‌ 1 ರಿಂದ ಮಾರ್ಚ್‌ 20ರವೆರೆಗೆ ನಡೆದಿತ್ತು. ಮಾರ್ಚ್‌ 21 ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ 76 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯುತ್ತಿದೆ. ಈಗಾಗಲೇ ಬಹುತೇಕ ವಿಷಯಗಳ ಮೌಲ್ಯಮಾಪನ ಕೊನೆಯ ಘಟ್ಟ ತಲುಪಿದೆ. ಕೆಲವು ವಿಷಯಗಳ ಮೌಲ್ಯಮಾಪನ ಈ ಮಾಸಾಂತ್ಯಕ್ಕೆ ಮುಗಿಯಲಿದೆ. ಹೆಚ್ಚೆಂದರೆ ಏಪ್ರಿಲ್‌ 5ರ ವೇಳೆಗೆ ಎಲ್ಲ ವಿಷಯಗಳ ಮೌಲ್ಯಮಾಪನ ಮುಗಿಯಲಿದೆ. 31 ಸಾವಿರ ಉಪನ್ಯಾಸಕರು ಮೌಲ್ಯಮಾಪನ ಮಾಡುತ್ತಿದ್ದಾರೆ. ಏಪ್ರಿಲ್‌ 2 ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. 2024ರಲ್ಲಿ ಏಪ್ರಿಲ್‌ 10 ರಂದು ಫಲಿತಾಂಶ ಪ್ರಕಟವಾಗಿತ್ತು.

ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಶುರು ಮಾಡಲಾಗಿದೆ...