Bengaluru, ಫೆಬ್ರವರಿ 27 -- Puttakkana Makkalu: ಕನ್ನಡಿಗರ ಅಚ್ಚುಮೆಚ್ಚಿನ ಜೀ ಕನ್ನಡ ವಾಹಿನಿಯಲ್ಲಿ ಸಂಜೆ 6; 30ಕ್ಕೆ ಪ್ರಸಾರವಾಗುವ 'ಪುಟ್ಟಕ್ಕನ ಮಕ್ಕಳು', ಸದ್ಯ ವೀಕ್ಷಕರ ಎದೆಬಡಿತ ಹೆಚ್ಚಿಸಿದೆ. ಪ್ರಸಾರದ ಮೊದಲ ವಾರದಲ್ಲಿ ಅತೀ ಹೆಚ್ಚು, ಅಂದರೆ 13.5 ಟಿಆರ್‌ಪಿ ಪಡೆದು ಕನ್ನಡಿಗರ ಮನಸು ಗೆದ್ದ ಖ್ಯಾತಿ ಈ ಧಾರಾವಾಹಿಯದು. ಇದೀಗ 900 ಸಂಚಿಕೆಗಳನ್ನು ಪೂರೈಸಿ ಸಾವಿರ ಸಂಚಿಕೆಗಳತ್ತ ಹೆಜ್ಜೆ ಇಡುತ್ತಿದ್ದರೂ ತನ್ನ ಜನಪ್ರಿಯತೆಯನ್ನು ಕಳೆದುಕೊಳ್ಳದೆ ಮುನ್ನುಗ್ಗುತ್ತಿದೆ.

'ಹೆಣ್ಣು ಮಕ್ಕಳ ಹೆತ್ತೋರು ಎಲ್ಲ ದೇವರಿಗೂ ದೊಡ್ಡೋರು' ಅನ್ನುವ ಈ ಧಾರಾವಾಹಿಯ ಹಾಡಿನ ಸಾಲು ಪುಟ್ಟಕ್ಕನ ಕಥೆಯ ಸಾರವನ್ನು ತೋರಿಸುತ್ತದೆ. ಗಂಡು ಮಗು ಆಗಿಲ್ಲ ಅನ್ನುವ ಕಾರಣಕ್ಕೆ ಗಂಡ ಗೋಪಾಲ ಪುಟ್ಟಕ್ಕನನ್ನು ಬಿಟ್ಟು ಹೋಗುತ್ತಾನೆ. ತಂದೆ ಇಲ್ಲದೆ ತಬ್ಬಲಿಯಾದ ಮೂರು ಹೆಣ್ಣು ಮಕ್ಕಳನ್ನು ಹೆಗಲಿಗೆ ಕಟ್ಟಿಕೊಂಡು, ಅವರಿಗೆ ಬದುಕಿನ ದಾರಿ ತೋರಿಸಲು ಹೋರಾಡುವ ದಿಟ್ಟ ಮಹಿಳೆಯ ಕಥೆಯೇ 'ಪುಟ್ಟಕ್ಕನ ಮಕ್ಕಳು' ಧಾರಾವಾಹಿ.

ಇದನ್ನೂ ಓದಿ: ನಂಬರ್‌ 1 ಸ...