Puttur,Mangaluru, ಏಪ್ರಿಲ್ 12 -- ಮಂಗಳೂರು: ಅನ್ನದ ಅಗುಳುಗಳೇ ಮುತ್ತಾಗಿ ಪರಿವರ್ತನೆಯಾಗಿ ಕೆರೆ ನಿರ್ಮಾಣಗೊಂಡ ಕ್ಷೇತ್ರವೆಂಬ ಹೆಗ್ಗಳಿಕೆ ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಇತಿಹಾಸ ಪ್ರಸಿದ್ಧ ಕೆರೆಯ ತಟದಲ್ಲೇ ಜಾತ್ರೋತ್ಸವದ ಅನ್ನದಾಸೋಹಕ್ಕೆ ವ್ಯವಸ್ಥೆಯಾಗಿದೆ. ಏಪ್ರಿಲ್ 1ರಂದು ಗೊನೆ ಮುಹೂರ್ತ ನಡೆದಿರುವ ಪುತ್ತೂರು ಕ್ಷೇತ್ರದಲ್ಲಿ ಏ.10 ರಿಂದ ವಾರ್ಷಿಕ ಜಾತ್ರೋತ್ಸವ ಆರಂಭಗೊಂಡಿದೆ. ಏ..20ರವರೆಗೆ ನಡೆಯುವ ಉತ್ಸವದಲ್ಲಿ ಪ್ರತಿದಿನ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ.

ಪುತ್ತೂರ ದೇವಸ್ಥಾನ ಜಾತ್ರೋತ್ಸವ ಹಿನ್ನೆಲೆಯಲ್ಲಿ ಪಲ್ಲಪೂಜೆ

ಪ್ರತೀ ವರ್ಷ ಜಾತ್ರೋತ್ಸವ ಸಂದರ್ಭದಲ್ಲಿ ದೇವಳದ ಎದುರಿನ ದೇವಮಾರು ಗದ್ದೆಯಲ್ಲಿ ಅನ್ನಸಂತರ್ಪಣೆಗೆ ವ್ಯವಸ್ಥೆ ಮಾಡಲಾಗುತ್ತಿತ್ತು. ಕ್ಷೇತ್ರದಲ್ಲಿ ಪ್ರತ್ಯೇಕ ಅನ್ನಪೂರ್ಣ ಅನ್ನಛತ್ರ ನಿರ್ಮಾಣಗೊಳ್ಳುತ್ತಿದ್ದು, ಲೋಕಾರ್ಪಣೆಗೆ ಸಜ್ಜುಗೊಳ್ಳುತ್ತಿದೆ. ಜಾತ್ರೋತ್ಸವ ಸಂದರ್ಭದ ಅನ್ನದಾಸೋಹಕ್ಕೆ ಅನ್ನಛತ್ರದ ಸ್ಥಳಾವಕಾಶ ಸಾಕ...