ಭಾರತ, ಏಪ್ರಿಲ್ 15 -- ರಾಯಚೂರು: ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ನಾಲ್ಕನೇ ಘಟಕದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದೆ. ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಪರಿವರ್ತಕದಲ್ಲಿ ಹೊತ್ತಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆಯೇ ಎಲ್ಲೆಡೆ ಹರಡುತ್ತಾ ಹೋಗಿದೆ. ಘಟಕದಲ್ಲಿದ್ದ ಕಾರ್ಮಿಕರು ಬೆಂಕಿ ನಂದಿಸಲು ಎಲ್ಲ ರೀತಿ ಪ್ರಯತ್ನ ಮಾಡಿದರೂ ಬೆಂಕಿ ನಿಯಂತ್ರಣಕ್ಕೆ ಬರಲಿಲ್ಲ. ಪರಿವರ್ತಕ ಸುಟ್ಟು ಕರಕಲಾಗಿದ್ದು, ಉಳಿದ ಉಪಕರಣಗಳಿಗೂ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಕಿ ತಗುಲುತ್ತಿದ್ದಂತೆಯೇ ವಿದ್ಯುತ್ ಕೇಂದ್ರದ ಅಧಿಕಾರಿಗಳು ಅಗ್ನಿಶಾಮಕ ದಳದ ಗಮನಕ್ಕೆ ತಂದು ಬೆಂಕಿ ಆರಿಸುವ ಕಾರ್ಯ ಮಾಡಿದ್ದಾರೆ. ಆರ್‌ಟಿಪಿಎಸ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಬೆಂಕಿಗೆ ಕಾರಣ ತಿಳಿದುಬಂದಿಲ್ಲ. ಅಲ್ಲದೆ, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿ ಅವಘಡದಿಂದ ಎಷ್ಟು ನಷ್ಟವಾಗಿದೆ ಎನ್ನುವುದು ಇದ...