ಭಾರತ, ಮಾರ್ಚ್ 23 -- ಕೇರಳ: ಉದ್ಯಮಿಯಾಗಿದ್ದು, ನಂತರ ರಾಜಕೀಯಕ್ಕೆ ಪ್ರವೇಶಿಸಿದ್ದ ರಾಜೀವ್ ಚಂದ್ರಶೇಖರ್ ಅವರನ್ನು ಕೇರಳದ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ನಾಮ ನಿರ್ದೇಶನ ಮಾಡಲಾಗಿದೆ. ಕೆ. ಸುರೇಂದ್ರನ್ ಬದಲಿಗೆ ಇವರ ಹೆಸರನ್ನು ಸೂಚಿಸಲಾಗಿದೆ. ಈ ವಿಚಾರವಾಗಿ ಸೋಮವಾರ (ಮಾರ್ಚ್ 24) ದೊಳಗೆ ಔಪಚಾರಿಕ ಘೋಷಣೆಯಾಗುವ ನಿರೀಕ್ಷೆ ಇದೆ.

ಇಂದು (ಮಾರ್ಚ್ 23) ತಿರುವನಂತಪುರಂನಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಕೇರಳ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಚಂದ್ರಶೇಖರ್ ಅವರ ಹೆಸರನ್ನು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಕೆ. ಸುರೇಂದ್ರನ್ ರಾಜ್ಯ ಅಧ್ಯಕ್ಷರಾಗಿ ಐದು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರ ಹೆಸರು ಆ ಹುದ್ದೆಗೆ ಸಂಭಾವ್ಯರ ಪಟ್ಟಿಯಲ್ಲಿತ್ತು. ರಾಜ್ಯದ ಹಿರಿಯ ನಾಯಕರಾದ ಶೋಭಾ ಸುರೇಂದ್ರನ್ ಮತ್ತು ಎಂ ಟಿ ರಮೇಶ್ ಹಾಗೂ ಇತರ ಹೆಸರು ಕೂಡ ಮುಂಚೂಣಿಯಲ್ಲಿತ್ತು.

ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಸಮಯದಲ್ಲಿ ರಮೇಶ್ ...