ಭಾರತ, ಮಾರ್ಚ್ 4 -- ಕನ್ನಡ ನಟಿ ರನ್ಯಾ ರಾವ್‌ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ. ವಿದೇಶದಿಂದ ಹೆಚ್ಚುವರಿ ಚಿನ್ನ ತಂದಿರುವ ಕಾರಣ ಈಕೆಯನ್ನು ಬಂಧಿಸಲಾಗಿದೆ. ದುಬೈನಿಂದ ಬೆಂಗಳೂರಿಗೆ ಆಗಮಿಸುವ ವೇಳೆಯಲ್ಲಿ ಇವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಗಳು ತಿಳಿಸಿವೆ. ವನ್ಯಾ ರಾವ್‌ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿಚ್ಚ ಸುದೀಪ್‌ ಜತೆ ಮಾಣಿಕ್ಯ ಸಿನಿಮಾದಲ್ಲಿ ನಟಿಸಿದ್ದರು. ಗೋಲ್ಡನ್‌ ಸ್ಟಾರ್‌ ಗಣೇಶ್‌ ಜತೆ ಪಟಾಕಿ ಚಿತ್ರದಲ್ಲಿ ನಟಿಸಿದ್ದರು. ತಮಿಳಿನ ವಾಘಾ ಸಿನಿಮಾದಲ್ಲಿಯೂ ನಟಿಸಿದ್ದರು.

ಮಾರ್ಚ್‌ 3ರಂದು ದುಬೈ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಟಿ ರನ್ಯಾ ಆಗಮಿಸಿದ್ದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಟಿವಿ9 ವರದಿ ತಿಳಿಸಿದೆ. ಈಕೆ ಡಿಜಿಪಿ ರಾಮ...