ಭಾರತ, ಮಾರ್ಚ್ 13 -- Ranya Rao: ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸದಂತೆ ಬೆಂಗಳೂರು 15ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ರನ್ಯಾ ರಾವ್ ಅವರ ತಾಯಿ ಹೆಚ್‌ಪಿ ರೋಹಿಣಿ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಸಂಬಂಧ ಪ್ರತಿವಾದಿ ಮಾಧ್ಯಮ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ಜೂನ್ 2ಕ್ಕೆ ವಿಚಾರಣೆ ಮುಂದೂಡಿದೆ.

ಇನ್ನೊಂದೆಡೆ, ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ಪೊಲೀಸ್ ಸಿಬ್ಬಂದಿ ಕರ್ತವ್ಯ ಲೋಪಕ್ಕೆ ಸಂಬಂಧಿಸಿ ಆದೇಶಿಸಿದ ಸಿಐಡಿ ತನಿಖೆಯ ಆದೇಶವನ್ನು ಕರ್ನಾಟಕ ಸರ್ಕಾರ ವಾಪಸ್ ಪಡೆದಿದೆ. ಆದರೆ, ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾರನ್ನು ನೇಮಿಸಿ, ಶಿಷ್ಟಾಚಾರ ಉಲ್ಲಂಘನೆ ಹಾಗೂ ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಪಾತ್ರದ ಬಗ್ಗೆ ತನಿಖೆ ನಡೆಸಿ ವರದಿಯನ್ನು ಒಂದು ವಾರದಲ್ಲಿ ಸಲ್ಲಿಸುವಂತೆ ಸೂಚಿಸಿದ ಆದೇಶವನ್ನು ನೀಡಿದ್ದು ಹಾಗೆಯೇ ಉಳಿಸಿದೆ. ಸದ್ಯ ಚಿನ್ನ ಕಳ್ಳಸಾಗಣೆ ಕೇಸ್‌ ಅನ್ನು ಡೈರೆಕ್ಟರೇಟ್ ಆಫ್...