Bangalore, ಮಾರ್ಚ್ 6 -- Ranya Rao: ದುಬೈನಿಂದ 14.8 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಕನ್ನಡದ ನಟಿ ಹಾಗೂ ಕರ್ನಾಟಕ ಹಿರಿಯ ಐಪಿಎಸ್‌ ಅಧಿಕಾರಿ ಸಂಬಂಧಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ಗುರುವಾರವೇ ವಿಚಾರಣೆಗೆ ಬರಲಿದೆ. ಬೆಂಗಳೂರಿನ ಸ್ಥಳೀಯ ನ್ಯಾಯಾಲಯದಲ್ಲಿ ಜಾಮೀನು ಕೋರಿ ರಾನ್ಯಾ ಪರ ವಕೀಲರು ಈಗಾಗಲೇ ಅರ್ಜಿಯನ್ನು ಸಲ್ಲಿಸಿದ್ದಾರೆ. ಅವರಿಗೆ ಜಾಮೀನು ಸಿಗಲಿದೆಯೋ ಅಥವಾ ಜೈಲು ವಾಸವೇ ಮುಂದುವರಿಯಲಿದೆಯೋ ಎನ್ನುವ ಕುತೂಹಲವಿದೆ. ದುಬೈನಿಂದ ಭಾರೀ ಪ್ರಮಾಣದಲ್ಲಿ ಚಿನ್ನ ಸಾಗಿಸುವ ವೇಳೆ ನಿಖರ ಮಾಹಿತಿ ಮೇರೆಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಬೆಂಗಳೂರಿನಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಬಂಧಿಸಲಾಗಿತ್ತು. ಆನಂತರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು,

Published by HT Digital Content Services with permission from HT Kannada....