Bengaluru, ಮಾರ್ಚ್ 7 -- ಕನ್ನಡ ನಟಿ ರನ್ಯಾ ರಾವ್ ಅವರು ತಮ್ಮ ಜಾಕೆಟ್‌ನಲ್ಲಿ ಚಿನ್ನದ ಗಟ್ಟಿಗಳನ್ನು ಅಡಗಿಸಿಟ್ಟುಕೊಂಡು ಕಳ್ಳಸಾಗಣೆ ಮಾಡಿದ್ದಾರೆ ಎಂದು ವರದಿಗಳು ಹೇಳಿದ್ದರೂ, ನಂತರದಲ್ಲಿ ದೈಹಿಕ ತಪಾಸಣೆಯ ಸಮಯದಲ್ಲಿ ಆಕೆಯ ಮೈಮೇಲೆ ನಿಷೇಧಿತ ವಸ್ತುಗಳು ಕಂಡುಬಂದಿವೆ ಎಂದು ಡಿಆರ್‌ಐ ಅಧಿಕಾರಿಗಳು ತಿಳಿಸಿದ್ದಾರೆ. ದುಬೈನಿಂದ 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ರಾಜ್ಯದ ಹಿರಿಯ ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯ ಮಲಪುತ್ರಿಯೂ ಆಗಿರುವ 33 ವರ್ಷದ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಡಿಆರ್‌ಐ ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆಯ ಖಚಿತ ಸುಳಿವು ಆಧರಿಸಿ ಬಂಧಿಸಿದ್ದರು. ನಂತರ ಅವರ ವಿಚಾರಣೆ ಮುಂದುವರಿದಿದೆ, ಈ ಸಂದರ್ಭದಲ್ಲಿ ಚಿನ್ನ ಕಳ್ಳಸಾಗಣೆ ಮಾಡಲು ರನ್ಯಾ ಆಯ್ದುಕೊಂಡ ವಿಧಾನದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ನಟಿ ರನ್ಯಾ ರ...