ಭಾರತ, ಮಾರ್ಚ್ 18 -- ಕನ್ನಡ ಚಿತ್ರಗಳನ್ನು ನೋಡುವುದಕ್ಕೆ ಜನ ಬರುತ್ತಿಲ್ಲ ಎಂಬ ಮಾತುಗಳು ಕೆಲವು ವರ್ಷಗಳಿಂದ ಹೆಚ್ಚು ಕೇಳಿ ಬರುತ್ತಿವೆ. ಅದಕ್ಕೆ ಪೂರಕವಾಗಿ, ಇತ್ತೀಚೆಗೆ ಬಿಡುಗಡೆಯಾದ ಚಿತ್ರಗಳಿಗೆ ಪ್ರೇಕ್ಷಕರು ಬಾರದೆ, ಬಹುತೇಕ ಎಲ್ಲಾ ಚಿತ್ರಗಳು ನೆಲಕಚ್ಚಿವೆ. ಆದರೆ, ಜನ ಚಿತ್ರ ನೋಡುತ್ತಿಲ್ಲ ಎಂದು ಆರೋಪ ಮಾಡುವುದು ಸರಿಯಲ್ಲ, ಒಳ್ಳೆಯ ಚಿತ್ರಗಳು ಬಂದರೆ ಖಂಡಿತಾ ಜನ ಬಂದೇಬರುತ್ತಾರೆ ಎಂದು ನಟ-ನಿರ್ದೇಶಕ ರವಿಚಂದ್ರನ್ ಹೇಳಿದ್ದಾರೆ.

ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್‍ ಮತ್ತು ಪ್ರಮೋದ್‍ ಅಭಿನಯದ 'ಭುವನಂ ಗಗನಂ' ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ, ಸಮಾರಂಭ ಆಯೋಜಿಸಿ ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬಂದು ಮಾತನಾಡಿರುವ ರವಿಚಂದ್ರನ್‍, 'ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ನಗುವಿಲ್ಲ. ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿರು...