Bangalore, ಜನವರಿ 26 -- ಬೆಂಗಳೂರು: ಕರ್ನಾಟಕ ರಾಜ್ಯವು ಸಂವಿಧಾನದ ಆಶಯಗಳಿಗನುಗುಣವಾಗಿ ಒಕ್ಕೂಟ ಧರ್ಮದ ನೀತಿರಿವಾಜುಗಳಿಗೆ ಬದ್ಧವಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಿದೆ. ಒಕ್ಕೂಟ ಧರ್ಮಕ್ಕೆ ಚ್ಯುತಿಯಾದಾಗ ತನ್ನ ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತಿದೆ. ಮುಂದೆಯೂ ಸಂವಿಧಾನ ವಿಧಿಸಿದ ಒಕ್ಕೂಟ ತತ್ವಗಳ ಅನುಸಾರ ರಾಜ್ಯ-ರಾಜ್ಯಗಳ ಸಂಬಂಧ ಮತ್ತು ಒಕ್ಕೂಟ ಸರಕಾರ ಮತ್ತು ರಾಜ್ಯ ಸರಕಾರಗಳ ಸಂಬಂಧ ಮುಂದುವರಿಯಬೇಕು ಎಂದು ಹೇಳಿರುವ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌, ಕರ್ನಾಟಕ ಸರ್ಕಾರವು ಅಭಿವೃದ್ದಿ ಪಥದಲ್ಲಿ ಮುನ್ನಡೆ ಸಾಧಿಸಿದ್ದು, ಗ್ಯಾರಂಟಿ ಯೋಜನೆಗಳ ಜತೆಯಲ್ಲಿಯೆ ಇತರೆ ವಲಯಗಳ ಅಭಿವೃದ್ದಿಗೆ ಒತ್ತು ನೀಡಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಮಾನಿಕ್‌ ಶಾ ಮೈದಾನದಲ್ಲಿ ಭಾನುವಾರ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಭಾಷಣ ಮಾಡಿದರು.

ಜನವರಿ 26 ಭಾರತದಲ್ಲಿ ಪ್ರಜಾಪ್ರಭುತ್ವ ಉದಯವಾದ ಐತಿಹಾಸಿಕ ದಿನ. ಎಪ್ಪತ್ತಾರು ವರ್ಷಗಳ ಹಿಂದೆ ಈ ದಿನದಂದು ಭಾರತೀಯರಾದ ನಾವು ನಮಗೆ ನಾವೇ ಅರ್ಪಿಸಿಕ...