Bengaluru, ಮಾರ್ಚ್ 25 -- ದೇಶದ ಜನಪ್ರಿಯ ಎಲೆಕ್ಟ್ರಾನಿಕ್ಸ್ ಮತ್ತು ಗ್ಯಾಜೆಟ್ ಬ್ರ್ಯಾಂಡ್ ಸ್ಯಾಮ್‌ಸಂಗ್ ಹೊಸ ಗ್ಯಾಲಕ್ಸಿ A26 5G ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದು ಬಜೆಟ್ ದರದಲ್ಲಿ ಗ್ರಾಹಕರಿಗೆ ಕೈಗೆಟುಕುವ ಮತ್ತು ವೈಶಿಷ್ಟ್ಯಗಳಿಂದ ಕೂಡಿದ ಆಯ್ಕೆಯನ್ನು ಒದಗಿಸುವ ಗುರಿ ಹೊಂದಿದೆ. ಆಕರ್ಷಕ ವಿನ್ಯಾಸ ಮತ್ತು ಸುಧಾರಿತ ಕ್ಯಾಮೆರಾ ಮತ್ತು ಬ್ಯಾಟರಿ ಸಾಮರ್ಥ್ಯ ಇದರ ವಿಶೇಷ. ಭಾರತದಲ್ಲಿ 24,999 ರೂ.ಗಳ ಆರಂಭಿಕ ಬೆಲೆಯೊಂದಿಗೆ, ಹೈ- ಎಂಡ್ ಮಾದರಿಗಳಲ್ಲಿ ಲಭ್ಯವಿರುವ ಫೀಚರ್‌ಗಳನ್ನು ಮಧ್ಯಮ ವರ್ಗದ ಗ್ರಾಹಕರಿಗೆ ನೀಡಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A26 5G ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಗ್ಯಾಲಕ್ಸಿ A26 5G 6.7 ಇಂಚಿನ ಫುಲ್‌ಎಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಮತ್ತು 120 ಹೆರ್ಟ್ಜ್ ರಿಫ್ರೆಶ್ ರೇಟ್ ಜತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ + ಅನ್ನು ಹೊಂದಿದೆ. ಆಕರ್ಷಕ ಡಿಸ್‌ಪ್ಲೇ ಮೂಲಕ ಮನರಂಜನೆ, ಕ್ಯಾಮೆರಾ ಮತ್ತು ಉತ್ತಮ ಗೇಮಿಂಗ್ ಅನುಭವವನ್ನು ಹೊಸ ಸ್ಯಾಮ್‌ಸಂಗ್...