ಭಾರತ, ಮಾರ್ಚ್ 24 -- ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಂದಲೇ ಸಂಗ್ರಹಿಸಬೇಕೆಂದು ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಇದರ ವಿರುದ್ಧ ಖಾಸಗಿ ಶಾಲೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದಾದ ಬಳಿಕ ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಹಾಗೂ ಕುಡಿಯುವ ನೀರಿನ ಶುಲ್ಕವನ್ನ ಶಾಲೆಗಳೇ ಭರಿಸಬೇಕೆಂದು ಸರ್ಕಾರ ಕಳೆದ ತಿಂಗಳಲಷ್ಟೇ ಹೇಳಿತ್ತು. ಇದರ ನಡುವೆ ಇದೀಗ ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ ಶಾಲೆಗಳ ಶುಲ್ಕವನ್ನು ಶೇಕಡಾ 30 ಮತ್ತು ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳ ಫೋಷಕರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

ನಿಮ್ಮ ಮಕ್ಕಳ ಶಾಲಾ ಶುಲ್ಕವನ್ನು ಹೆಚ್ಚಿಸಲಾಗಿದೆಯೇ ಎಂಬ ಪ್ರಶ್ನೆಗೆ ಬೆಂಗಳೂರಿನ ಶೇಕಡಾ 58 ರಷ್ಟು ಜನರು ಹೌದು ಎಂದಿದ್ದಾರೆ. ಅಲ್ಲದೆ, ಕಳೆದ 2 ವರ್ಷಗಳಲ್ಲಿ ಶೇಕಡಾ 30ಕ್ಕಿಂತ ಅಧಿಕ ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ. ಇದೇ ಅವಧಿಯಲ್ಲಿ ಸ್ಕ...