Bengaluru, ಮಾರ್ಚ್ 26 -- Sees Kaddi: ಇತ್ತೀಚಿನ ದಿನಗಳಲ್ಲಿ ಮಕ್ಕಳ ಚಿತ್ರಗಳ ಸಂಖ್ಯೆ ಕಡಿಮೆಯಾಗಿದೆ ಅಂತೊಂದು ಕೊರಗು ಕನ್ನಡದ ಸಿನಿಮಾ ಪ್ರೇಮಿಗಳಲ್ಲಿದೆ. ಒಂದು ಸಿನಿಮಾ ರಂಗದ ಜೀವಂತಿಕೆಯ ದೃಷ್ಟಿಯಿಂದ ಎಲ್ಲ ಬಗೆಯ ಸಿನಿಮಾಗಳೂ ಕೂಡಾ ಕಾಲ ಕಾಲಕ್ಕೆ ರೂಪುಗೊಳ್ಳಬೇಕಾಗುತ್ತೆ. ಈ ನಿಟ್ಟಿನಲ್ಲಿ ಸಿನಿಮಾಸಕ್ತರ ನಡುವಲ್ಲೊಂದು ಚರ್ಚೆ ಚಾಲ್ತಿಯಲ್ಲಿರುವಾಗಲೇ ಸದ್ದಿಲ್ಲದೆ ತಯಾರಾಗಿ ನಿಂತಿರುವ ವಿಶಿಷ್ಟ ಕಥಾನಕದ ಮಕ್ಕಳ ಚಿತ್ರವೊಂದು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಸದ್ದು ಮಾಡಿದೆ. ಇನ್ನೇನು ಆರಂಭವಾಗಲಿರೋ ಶಾಲಾ ರಜಾ ದಿನಗಳು ಅಂತಿಮ ಘಟ್ಟ ತಲುಪಿಕೊಳ್ಳುವ ಹೊತ್ತಿಗೆಲ್ಲ ಅದ್ದೂರಿಯಾಗಿ ತೆರೆಗಾಣಲು ತಯಾರಿಯೂ ಆರಂಭವಾಗಿದೆ. ಹಾಗೆ ಬಿಡುಗಡೆಗೆ ತಯಾರಾಗಿರುವ ಮಕ್ಕಳ ಚಿತ್ರ ʻಸೀಸ್ ಕಡ್ಡಿʼ

ಇದು ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ನಿರ್ದೇಶಕರಾಗಿ ಪರಿಚಿತರಾಗಿರುವ ರತನ್ ಗಂಗಾಧರ್ ನಿರ್ದೇಶನದ ಚಿತ್ರ. ಸೀಸ್ ಕಡ್ಡಿ ಎಂಬುದು ನಮ್ಮೆಲ್ಲರ ಪಾಲಿಗೆ ಅಕ್ಷರದ ಬೆಳಕು ತೋರುವ ವಸ್ತು. ಅಂಥಾ ಪೆನ್ಸಿಲ್ ಅನ್ನು ರೂಪಕವಾಗಿಟ್...