ಭಾರತ, ನವೆಂಬರ್ 26 -- ಬೆಂಗಳೂರು: ಯಾವುದೇ ಚುನಾವಣೆ ಸಂವಿಧಾನದ ರೀತಿಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯಬೇಕು. ಮತದಾರರ ಪಟ್ಟಿಯಲ್ಲಿ ಪಾರದರ್ಶಕತೆ ಇರಬೇಕು ಅದನ್ನು ತಿರುಗಿಸುವ ಕೆಲಸಕ್ಕೆ ಅವಕಾಶ ನೀಡಬಾರದು. ಆದರೆ ಬಿಜೆಪಿ ಸರ್ಕಾರ ಖಾಸಗಿ ಸಂಸ್ಥೆ ಮೂಲಕ ಮತದಾರರ ಪಟ್ಟಿಯನ್ನು ತಿರುಚಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಖಾಸಗಿ ಸಂಸ್ಥೆ ಮೂಲಕ ಮತದಾರರ ಪಟ್ಟಿಯನ್ನು ತಿರುಚಿಸಿದೆ. ಚಿಲುಮೆ ಸಂಸ್ಥೆಯನ್ನು ಜಿಲ್ಲಾ ಚುನಾವಣಾ ಅಧಿಕಾರಿ ನೇಮಿಸಿದ್ದು, ಇವರೇ ಬಿಬಿಎಂಪಿಯ ಮುಖ್ಯ ಆಯುಕ್ತರಾಗಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳೇ ಬಿಬಿಎಂಪಿ ಉಸ್ತುವಾರಿಗಳಾಗಿದ್ದು ಅವರು ಕೂಡ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದೆವು. ಇದರ ಜೊತೆಗೆ ...