ಭಾರತ, ಮಾರ್ಚ್ 7 -- Sivasri Skandaprasad: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿವಾಹವಾಗಿದ್ದಾರೆ. ಸಾಕಷ್ಟು ಬಾರಿ ತೇಜಸ್ವಿ ಸೂರ್ಯ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು, ಆದರೆ ಈ ಬಾರಿ ಆ ಸುದ್ದಿ ನಿಜವಾಗಿದೆ. ಸಾಕಷ್ಟು ಬಾರಿ ಮದುವೆಯ ವಿಚಾರವಾಗಿಯೇ ಅವರನ್ನು ಪ್ರಶ್ನೆ ಮಾಡಲಾಗುತ್ತಿತ್ತು. ನೀವು ಯಾವ ರೀತಿ ಹುಡುಗಿಯನ್ನು ಇಷ್ಟಪಡುತ್ತೀರಿ ಎಂದು ಪ್ರಶ್ನೆ ಮಾಡಲಾಗುತ್ತಿತ್ತು, ಆದರೆ, ಸ್ಪಷ್ಟ ಉತ್ತರವನ್ನು ಅವರೆಂದೂ ನೀಡುತ್ತಿರಲಿಲ್ಲ. ಕೆಲ ತಿಂಗಳ ಹಿಂದೆ ಅವರು ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ ಶಿವಶ್ರೀ ಅವರನ್ನು ವಿವಾಹವಾಗುತ್ತಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

ನಿನ್ನೆ ಮಾರ್ಚ್ 6ರಂದು ಬೆಂಗಳೂರಿನಲ್ಲಿ, ತೇಜಸ್ವಿ ಸೂರ್ಯ ಅವರು ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದ್ದಾರೆ. ಶಿವಶ್ರೀ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆಯಾಗಿದ್ದಾರೆ. ಅವರ ಇಡೀ ಕುಟುಂಬವೇ ಕಲಾವಿದರ ಕುಟುಂಬ.

ಚೆನ್ನೈ ಮೂಲದ ಗಾಯಕಿ, ಭರತನಾಟ್ಯ ಕಲಾವಿದೆ ಆಗಿರುವ ಶಿವಶ್ರೀ ಸ್ಕಂದಪ್ರಸಾದ್ ಸಾಕಷ್...