Bengaluru, ಮಾರ್ಚ್ 24 -- ಬೆಂಗಳೂರು: ಇನ್ನೇನು ಯುಗಾದಿ ಮತ್ತು ರಂಜಾನ್ ಹಬ್ಬಕ್ಕಾಗಿ ಜನ ಈಗಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳುವ ಯೋಜನೆ ಮಾಡಿಕೊಂಡಿದ್ದಾರೆ. ಪ್ರತೀ ಬಾರಿಯಂತೆ ಈ ಬಾರಿಯೂ ಬಸ್ ಮತ್ತು ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿಯೇ ಇರಲಿದೆ. ಈ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು, ಸಿಂಗಲ್ ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ ನಡೆಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ಎಕ್ಸ್ಪ್ರೆಸ್ ವಿಶೇಷ ರೈಲು ಮಾರ್ಚ್ 28 ರಂದು ರಾತ್ರಿ 9.15 ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ರೈಲು ಸಂಖ್ಯೆ 06567 ಮೈಸೂರು-ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು ಮಾರ್ಚ್ 28, 2025 ರಂದು ಸಂಜೆ 7.10 ಕ್ಕೆ ಮೈಸೂರಿನಿಂದ ಹೊರಟು ಮರುದಿನ ಮಧ್ಯಾಹ್ನ 2.05ಕ್ಕೆ ವಿಜಯಪುರವನ್ನು ತಲುಪಲಿದೆ.
ರೈಲು ಸಂಖ್ಯೆ 06568 ವಿಜಯಪುರ-ಮೈಸೂರು ಎಕ್ಸ್ಪ್ರೆಸ್ ವಿಶೇಷ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.