ಭಾರತ, ಏಪ್ರಿಲ್ 29 -- ಬೆಂಗಳೂರು: ಚಾಮರಾಜನಗರ ಸಂಸದ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವಿಧಿವಶರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದ ಬಳಿಕ ಅವರು ಇಂದು (ಏಪ್ರಿಲ್ 29) ನಸುಕಿನ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದರು. 5 ದಶಕ ಕಾಲ ರಾಜಕಾರಣ ನಡೆಸಿದ ದಲಿತ ನಾಯಕ, ಕೇಂದ್ರ ಸರ್ಕಾರದ ವಾಜಪೇಯಿ ಸಂಪುಟದಲ್ಲಿ ಸಚಿವರೂ ಆಗಿದ್ದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಗಳ ಕಾರಣ ಏಪ್ರಿಲ್ 22 ರಂದು ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀನಿವಾಸ್ ಪ್ರಸಾದ್ ಅವರಿಗೆ ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲಿದ್ದರು. ಆದ್ದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದೇ ಕಾರಣಕ್ಕೆ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ಆದಾಗ್ಯೂ, ಇಂದು (ಏಪ್ರಿಲ್ 29) ನಸುಕಿನ 1.20ರ ವೇಳೆಗೆ ಅವರಿಗೆ ತೀವ್ರ ಹೃದಯಾಘಾತವಾಯಿತು. ಇದರಿಂದಾಗಿ ಅವರು ವಿಧಿವಶರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಶ್ರೀನಿವಾಸ್ ಪ್ರಸಾದ್ ಅವ...