ಭಾರತ, ಏಪ್ರಿಲ್ 13 -- ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-1 ಮಾರ್ಚ್ 21 ರಿಂದ ಏಪ್ರಿಲ್ 4, 2025 ರವರೆಗೆ ನಡೆದಿದೆ. ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಮೇ 15 ರಿಂದ ಆರಂಭವಾಗುತ್ತಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಮೌಲ್ಯಮಾಪನ ಕಾರ್ಯದಲ್ಲಿ 35 ಜಿಲ್ಲೆಗಳ ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಉಪ ಮೌಲ್ಯಮಾಪಕರು ಏಪ್ರಿಲ್‌ 12 ರಂದು ಹಾಜರಾಗಿದ್ದರೆ ಸಹಾಯಕ ಮೌಲ್ಯಮಾಪಕರು ಏಪ್ರಿಲ್‌ 15 ರಂದು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ -1ಕ್ಕೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ಈ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೇ 2ನೇ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆಗಳಿವೆ. 2024 ರಲ್ಲಿ ನಡೆದ ಪರೀಕ್ಷೆಯಲ್ಲಿ 6,31,204 ವಿ...