ಭಾರತ, ಮಾರ್ಚ್ 24 -- SSLC Exam: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪ್ರತಿ ವಿದ್ಯಾರ್ಥಿಗಳ ಜೀವನದಲ್ಲಿ ಬಹುಮುಖ್ಯ ಘಟ್ಟ. ಈ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧಾರ ಮಾಡುತ್ತವೆ ಎಂದರೂ ತಪ್ಪಾಗಲಿಕ್ಕಿಲ್ಲ. ಈಗಾಗಲೇ ಪಿಯುಸಿ ಪರೀಕ್ಷೆಗಳು ಮುಗಿದಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಆರಂಭವಾಗಿವೆ.

ಇಂದು (ಮಾರ್ಚ್ 24) ಎಸ್‌ಎಸ್‌ಎಲ್‌ಸಿ ಗಣಿತ ಹಾಗೂ ಸಮಾಜಶಾಸ್ತ್ರ ವಿಷಯದ ಪರೀಕ್ಷೆಗಳು ನಡೆಯಲಿಕ್ಕಿವೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ ಸಿದ್ಧತೆಯನ್ನೂ ಮಾಡಿಕೊಂಡು ರೆಡಿ ಆಗಿದ್ದಾರೆ. ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಚೆನ್ನಾಗಿ ಸಿದ್ಧತೆ ನಡೆಸಿ ಇರುತ್ತಾರೆ. ಆದರೆ ಕೊನೆಯ ಕ್ಷಣದಲ್ಲಿ ಗಾಬರಿ ಮಾಡಿಕೊಂಡು, ಗಡಿಬಿಡಿ ಮಾಡಿಕೊಂಡು ಪರೀಕ್ಷೆಯಲ್ಲಿ ತಪ್ಪು ಉತ್ತರ ಬರೆಯುವುದು ಅಥವಾ ಅರ್ಧಂಬರ್ಧ ನೆನಪಿಗೆ ಬಂದಷ್ಟು ಬರೆಯುವುದು ಇವುಗಳನ್ನು ಮಾಡುತ್ತಾರೆ. ಇದರಿಂದ ಅಂಕ ಕಡಿಮೆಯಾಗುತ್ತದೆ, ಇದು ಅವರ ಒಟ್ಟಾರೆ ಫಲಿತಾಂಶದ ಮೇಲೂ ಪರಿಣಾಮ ಬೀರುತ್ತದೆ. ಆದರೆ ಪರೀಕ್ಷೆಗೆ ಸಿದ್ಧತೆ ಮಾಡ...