Bangalore, ಮಾರ್ಚ್ 20 -- SSLC Exam 2025: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ 2025 ರ ಪರೀಕ್ಷೆಗಳು ಮಾರ್ಚ್‌ 21 ರಿಂದ ಆರಂಭವಾಗಲಿದ್ದು. ಎಸ್‌ಎಸ್‌ಎಲ್‌ಸಿ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ ಇರಲಿದೆ. ಅವರು ಮನೆಯಿಂದ ಹೊರಡುವ ಹತ್ತಿರದ ನಿಲ್ದಾಣದಿಂದ ಪರೀಕ್ಷಾ ಕೇಂದ್ರದವರೆಗೂ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವಂತೆ ಕರ್ನಾಟಕ ರಾಜ್ಯ ರಸ್ತೆ ನಿಗಮ ಆದೇಶವನ್ನು ಹೊರಡಿಸಿದೆ. ಇದರೊಟ್ಟಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹೊರಟ ವಿದ್ಯಾರ್ಥಿಗಳು ಬಸ್‌ ಪ್ರಯಾಣದ ವೇಳೆ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಬೇಕು. ಬಸ್‌ನವರು ಕೂಡ ಕೋರಿಕೆ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು.ಪರೀಕ್ಷೆ ನಡೆಯುವ ದಿನಗಳಂದು ಕೆ.ಎಸ್.ಆರ್.ಟಿ.ಸಿ ಬಸ್ ಗಳು ಸರಿಯಾದ ಸಮಯದಲ್ಲಿ ನಿಗದಿಪಡಿಸಿರುವ ರೀತಿ ಟ್ರಿಪ್ ಗಳಲ್ಲಿ ಸಂಚರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಸೂಚನೆಯನ್ನು ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳ...