ಭಾರತ, ಫೆಬ್ರವರಿ 13 -- ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಮೂಲದವರಾದ ಪರಿಸರ ಹಾಗೂ ಮದ್ಯಪಾನ ವಿರೋಧಿ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡು, ಜನಪದ ಗಾಯನದ ಮೂಲಕ ಗಮನ ಸೆಳೆದಿದ್ದ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರು ಗುರುವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಸುಕ್ರಿಬೊಮ್ಮಗೌಡ ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಅಲ್ಲಿಂದ ಮನೆಗೆ ಬಂದಿದ್ದರು. ಎರಡು ದಿನದಿಂದ ಆರಾಮಾಗಿಯೇ ಇದ್ದ ಸುಕ್ರಿ ಅವರ ಆರೋಗ್ಯದಲ್ಲಿ ಗುರುವಾರ ಬೆಳಗಿನ ಜಾವ ವ್ಯತ್ಯಯ ಕಾಣಿಸಿಕೊಂಡಿತು. ಚಿಕಿತ್ಸೆಗೆಂದು ಕರೆದುಕೊಂಡು ಹೋಗಲು ಕುಟುಂದವರು ಅಣಿಯಾಗುವಾಗಲೇ ಅಂಕೋಲಾ ತಾಲ್ಲೂಕಿನ ಬಡಗೇರಿಯಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೂರು ವರ್ಷದ ಹಿಂದೆಯೂ ಇದೇ ರೀತಿ ಉಸಿರಾಟದ ಸಮಸ್ಯೆಯಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಸುಕ್ರಿ ಅವರನ್ನು ಮಂಗಳೂರಿನ ಆಸ್ಪ್ರತ್ರೆಗೆ ದಾಖಲಿಸಲಾಗಿತ...