ಭಾರತ, ಫೆಬ್ರವರಿ 23 -- Summer Karnataka 2025: ಉತ್ತರ ಕರ್ನಾಟಕದ ಮೂರ್ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮಲಪ್ರಭಾ ನದಿಯ ನವಿಲುತೀರ್ಥ ಜಲಾಶಯದಲ್ಲಿ ಬೇಸಿಗೆ ಮುಗಿಯುವರೆಗೂ ಕುಡಿಯುವ ನೀರಿಗೆಂದೇ 15 ಟಿ.ಎಂ.ಸಿ ನೀರು ಮೀಸಲು ಸೂಚನೆ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ ಜಿಲ್ಲೆಯ ಜತೆಗೆ ಗದಗ ಜಿಲ್ಲೆಯ ಕೆಲವು ಭಾಗಗಳಿಗೆ ಮಲಪ್ರಭಾ ನದಿ ಹಾಗೂ ಜಲಾಶಯದಿಂದಲೇ ನೀರಿ ಒದಗಿಸಲಾಗುತ್ತದೆ. ಬೆಳಗಾವಿ ಜಿಲ್ಲೆಯ ಸವದತ್ತಿ, ಬೈಲಹೊಂಗಲ, ರಾಮದುರ್ಗ, ಬಾಗಲಕೋಟೆ ಜಿಲ್ಲೆಯ ಮುಧೋಳ, ಬಾದಾಮಿ, ಗುಳೇದಗುಡ್ಡ, ಬಾಗಲಕೋಟೆ, ಹುನಗುಂದ ತಾಲ್ಲೂಕು, ಗದಗ ಜಿಲ್ಲೆಯ ರೋಣ, ಗಜೇಂದ್ರಗಢ ತಾಲ್ಲೂಕು, ಧಾರವಾಡ ತಾಲ್ಲೂಕಿನ ಕೆಲವು ಭಾಗಗಳಿಗೆ ಇಲ್ಲಿಂದಲೇ ಕುಡಿಯುವ ನೀರು ಒದಗಿಸುವುದರಿಂದ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.

ಮಲಪ್ರಭಾ ನವಿಲುತೀರ್ಥ ಜಲಾಶಯದಲ್ಲಿ ಸದ್ಯ2063.09 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟ 2097.50 ಅಡಿ. ಕಳೇದ ವರ್ಷ ಇದೇ ದಿನ 2053.75 ಅಡಿ ನ...