ಭಾರತ, ಫೆಬ್ರವರಿ 7 -- ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅಭಿನಯದ 'ತಾಂಡೇಲ್' ಸಿನಿಮಾದ ಬಗ್ಗೆ ಟ್ವಿಟರ್‌ನಲ್ಲಿ ಸಾಕಷ್ಟು ಜನ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಂದು ಮೊಂಡೆಟಿ ನಿರ್ದೇಶನದ ಈ ಸಿನಿಮಾ ಇಂದು (ಫೆ 7) ಬಿಡುಗಡೆಯಾಗಿದೆ. ಎಕ್ಸ್‌ ಬಳಕೆದಾರರ ಅಭಿಪ್ರಾಯಗಳ ಪ್ರಕಾರ ಸಿನಿಮಾ ಹೇಗಿದೆ ಎಂಬುದನ್ನು ನಾವಿಲ್ಲಿ ನೀಡಿದ್ದೇವೆ. ಇತ್ತೀಚೆಗೆ ಬಿಡುಗಡೆಯಾದ ಹಾಡುಗಳು, ಟೀಸರ್‌ಗಳು ಮತ್ತು ಟ್ರೇಲರ್‌ಗಳನ್ನು ನೋಡಿದ ನಂತರ ಹಲವರು ಈ ಸಿನಿಮಾವನ್ನು ನೋಡಲೇಬೇಕು ಎಂದು ಕಾದಿದ್ದರು. ಭಾರಿ ನಿರೀಕ್ಷೆಗಳ ನಡುವೆ ಬಿಡುಗಡೆಯಾದ ಈ ಚಿತ್ರದಲ್ಲಿ ನಾಗಚೈತನ್ಯ ಮೀನುಗಾರನಾಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಅಲ್ಲು ಅರವಿಂದ್ ಪ್ರಸ್ತುತಪಡಿಸುತ್ತಿರುವ ಈ ಚಿತ್ರವನ್ನು ಬನ್ನಿ ವಾಸು ದೊಡ್ಡ ಮಟ್ಟದಲ್ಲಿ ನಿರ್ಮಿಸಿದ್ದಾರೆ ಮತ್ತು ದೇವಿ ಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ವಿಡಾಮುಯರ್ಚಿ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? ಅಜಿತ್ ಕುಮಾರ್ ಸಿನಿಮಾಗೆ...