ಭಾರತ, ಮಾರ್ಚ್ 25 -- ತಿರುಪತಿ: ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಸಭೆ ಇತ್ತೀಚೆಗೆ ನಡೆದಿದ್ದು, ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಟಿಟಿಡಿ ಉದ್ಯೋಗಗಳಿಗೆ ಈ ಬಾರಿ ಬಜೆಟ್‌ನಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಮೀಸಲಿಡಲಾಗಿದೆ. ಅಲ್ಲದೇ ಟಿಟಿಡಿ ಉದ್ಯೋಗಿಗಳಿಗೆ ಹಲವು ಅನುಕೂಲಕರ ಯೋಜನೆಗಳನ್ನು ಕೂಡ ಜಾರಿಗೆ ತರಲಾಗಿದೆ.

ತಿರುಮಲ ತಿರುಪತಿ ದೇವಸ್ಥಾನವು ಪ್ರತಿ ಮೂರು ತಿಂಗಳಿಗೊಮ್ಮೆ ಖಾಯಂ ಉದ್ಯೋಗಿಗಳಿಗೆ ಸುಪಥ ದರ್ಶನವನ್ನು ಒದಗಿಸಲಿದೆ ಎಂದು ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಹೇಳಿದ್ದಾರೆ. ಅಲ್ಲದೇ ಉದ್ಯೋಗಿಗಳಿಗೆ ಟಿಕೆಟ್ ನೀಡಿ ಶ್ರೀವಾರಿ ದರ್ಶನ ಒದಗಿಸುವುದಾಗಿ ಅವರು ಹೇಳಿದ್ದಾರೆ. ತಿರುಮಲದಲ್ಲಿ ಪರವಾನಗಿ ಇಲ್ಲದ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಕೂಡ ಅವರು ಸಭೆಯಲ್ಲಿ ಹೇಳಿದ್ದಾರೆ. ತಿತಿಡೆ ಟ್ರಸ್ಟಿಗಳ ಮಂಡಳಿಯ ಸಭೆಯ ನಂತರ ಇಒ ಶ್ಯಾಮಲಾ ರಾವ್ ಅವರ ಜೊತೆ ಮಾಧ್ಯಮಗಳ ಜೊತೆ ಮಾತನಾಡುತ್ತಾ ಬಿ.ಆರ್.ನಾಯ್ಡು ಈ ವಿಚಾರಗಳನ್ನು ತಿಳಿಸಿದರು. ಆಡಳಿತ ಮಂಡಳಿಯ ಸ...