Tumkur, ಮಾರ್ಚ್ 13 -- Tumkur News: ಇತಿಹಾಸ ಪ್ರಸಿದ್ದ ತುಮಕೂರು ಜಿಲ್ಲೆಯ ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಕರಿಗಿರಿ ಕ್ಷೇತ್ರದಲ್ಲಿ ಲಕ್ಷ್ಮಿನರಸಿಂಹಸ್ವಾಮಿಯ ಬ್ರಹ್ಮರಥೋತ್ಸವವು ಮಧ್ಯಾಹ್ನ ಭಕ್ತಾದಿಗಳ ಹರ್ಷೋದ್ಘಾರದ ನಡುವೆ ಗರುಡ ಬಂದು ರಥ ಪ್ರದಕ್ಷಿಣೆ ಹಾಕಿದ ನಂತರ ವಿದ್ಯುಕ್ತವಾಗಿ ನೆರವೇರಿತು.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಶಾಸಕ ಬಿ. ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಟಿ. ಸುನೀಲ್ ಕುಮಾರ್ ಅವರು ಶ್ರೀಲಕ್ಷ್ಮಿ ನರಸಿಂಹ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು, ನಂತರ ರಥೋತ್ಸವಕ್ಕೆ ಚಾಲನೆ ದೊರೆಯಿತು.

ರಥೋತ್ಸವದ ಅಂಗವಾಗಿ ಮುಂಜಾನೆಯೇ ಶ್ರೀಸ್ವಾಮಿಗೆ ಅಭಿಷೇಕ ನೆರವೇರಿತು, ದ...