Udupi, ಮಾರ್ಚ್ 13 -- Udupi News: ಪೊಲೀಸರಿಗೆ ಅಪಘಾತ ನಡೆಸಿ ಪರಾರಿಯಾಗಿ ಹಾಸನದಲ್ಲಿ ಬಂಧಿಸಿ ಮಣಿಪಾಲಕ್ಕೆ ಕರೆತರುತ್ತಿದ್ದ ಗರುಡ ಗ್ಯಾಂಗ್‌ನ ಇಸಾಕ್‌ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಇಸಾಕ್ ಕಾಲಿಗೆ ಗುಂಡೇಟು ತಗಲಿದ್ದು, ಇಬ್ಬರು ಪೊಲೀಸರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ನೆಲಮಂಗಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲದಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಸಾಕ್ ಹಾಗೂ ಇತರರ ಬಂಧನಕ್ಕಾಗಿ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ, ಮಲ್ಪೆ ವೃತ್ತ ನಿರೀಕ್ಷಕರು ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.

ಈ ತಂಡವು ಆರೋಪಿತರ ಜಾಡನ್ನು ಹಿಡಿದು, ಮಾ.12 ರಂದು ಮಧ್ಯಾಹ್ನ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಸಾಕ್ ಸೇರಿದಂತೆ ಒಟ್ಟು ನಾಲ್ಕು ಆರೋಪಿಗಳನ್ನು ಬಂಧಿಸಿತ್ತು.

ಈ ಎಲ್ಲಾ ಆರೋಪಿಗಳನ್ನು ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಣಿಪಾಲಕ್ಕೆ ಕರ...