New Delhi, ಏಪ್ರಿಲ್ 13 -- UGC Notification: ಭಾರತದ ವಿವಿಧ ವಿಶ್ವವಿದ್ಯಾಲಯಗಳ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಇನ್ನು ವರ್ಷಕ್ಕೆ ಎರಡು ಸಲ ಅವಕಾಶ ಸಿಗಲಿದೆ. ಯುಜಿಸಿ ಅಂದರೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಇದಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಈಗಾಗಲೇ ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯ ಅಥವಾ ಇಗ್ನೋ ನಡೆಸುವಂತೆ ಇನ್ನು ಭಾರತದ ಯಾವುದೇ ವಿಶ್ವವಿದ್ಯಾಲಯವೂ ವರ್ಷಕ್ಕೆ ಎರಡು ಬಾರಿ ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸಬಹುದು. ಅಂದರೆ, ಜುಲೈ-ಆಗಸ್ಟ್ ಮತ್ತು ಜನವರಿ-ಫೆಬ್ರವರಿಯಲ್ಲಿ ಎರಡು ಬಾರಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಲೈವ್ ಹಿಂದೂಸ್ತಾನ್ ವರದಿ ಮಾಡಿದೆ.

ಮೂಲಸೌಕರ್ಯ, ಬೋಧಕವರ್ಗ ಮತ್ತು ಬೆಂಬಲ ವ್ಯವಸ್ಥೆಯನ್ನು ಖಾತರಿಪಡಿಸಿಕೊಂಡ ನಂತರ ವಿಶ್ವವಿದ್ಯಾಲಯಗಳು ವರ್ಷಕ್ಕೆ ಎರಡು ಬಾರಿ ಅಡ್ಮಿಷನ್‌ ವ್ಯವಸ್ಥೆಯನ್ನು ಜಾರಿಗೆ ತರಬಹುದು ಎಂದು ಯುಜಿಸಿ ಹೇಳಿದೆ. ಇದಲ್ಲದೆ, ವಿದ್ಯಾರ್ಥಿಗಳು ಕಡಿಮೆ ಸಮಯದ...