Bengaluru, ಮಾರ್ಚ್ 28 -- UI TV Premiere: ಸ್ಯಾಂಡಲ್‌ವುಡ್‌ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ ನಟಿಸಿರುವ ಹೊಚ್ಚಹೊಸ ಸಿನಿಮಾ 'UI' ಮೊಟ್ಟಮೊದಲ ಬಾರಿಗೆ ಜೀ ಕನ್ನಡ ವಾಹಿನಿಯಲ್ಲಿ ಭಾನುವಾರ ಸಂಜೆ 4:30ಕ್ಕೆ ಪ್ರಸಾರವಾಗಲಿದೆ. ತಾವೇ ನಿರ್ದೇಶನ ಮಾಡಿದ UI ಚಿತ್ರದಲ್ಲಿ ಉಪೇಂದ್ರ ಅವರು ಕಲ್ಕಿ ಮತ್ತು ಸತ್ಯ ಎಂಬ ಪಾತ್ರವನ್ನು ನಿರ್ವಹಿಸಿದ್ದು ಅವರಿಗೆ ರೀಷ್ಮಾ ನಾಣಯ್ಯ ಜೋಡಿಯಾಗಿದ್ದಾರೆ. ಅಷ್ಟೇ ಅಲ್ಲದೆ, ರವಿಶಂಕರ್, ಸಾಧುಕೋಕಿಲ, ನಿಧಿ ಸುಬ್ಬಯ್ಯ, ಮುರಳಿ ಶರ್ಮಾ ಹಾಗು ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಉಪೇಂದ್ರ ಸತ್ಯ ಮತ್ತು ಕಲ್ಕಿ ಎಂಬ ದ್ವಿಪಾತ್ರದಲ್ಲಿ ಅಭಿನಯಿಸಿದ್ದು, ಈ ಸಿನಿಮಾದಲ್ಲಿ 'ನೀವು ಬುದ್ಧಿವಂತರಾಗಿದ್ರೆ ಈಗಲೇ ಚಿತ್ರಮಂದಿರದಿಂದ ಎದ್ದೋಗಿ' ಎಂಬ ಉಪ್ಪಿಯ ಲೈನ್ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿತ್ತು. 'ಆಡು ಮುಟ್ಟದ ಸೊಪ್ಪಿಲ್ಲ' ಎಂಬ ಗಾದೆ ಮಾತಿನಂತೆ ಈ ಸಿನಿಮಾದಲ್ಲಿ ಉಪೇಂದ್ರ ಹೇಳದೇ ಇರುವ ವಿಚಾರಗಳೇ ಇಲ್ಲ. ದೇವರು, ಜಾತಿ, ಧರ್ಮ, ಪ್ರಕೃತಿ, ಸಮಾಜ, ಮ...