Hyderabad, ಜನವರಿ 29 -- UI World Television Premier: ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ನಟಿಸುವುದರ ಜತೆಗೆ ನಿರ್ದೇಶಕರಾಗಿಯೂ ಕಂಬ್ಯಾಕ್ ಮಾಡಿದ ಸಿನಿಮಾ ಯುಐ. ಡಿಸೆಂಬರ್ 20ರಂದು ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಹಿಂದಿ, ಬೆಂಗಾಲಿ ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ಅದ್ಧೂರಿಯಾಗಿ ತೆರೆಗೆ ಬಂದಿತ್ತು. ಪ್ರೇಕ್ಷಕರಿಂದಲೂ ಮೆಚ್ಚುಗೆ ಪಡೆದಿದ್ದ ಈ ಚಿತ್ರ, ವಿಮರ್ಶೆ ದೃಷ್ಟಿಯಿಂದ ಪ್ರೇಕ್ಷಕರ ತೆಲೆಗೆ ಹುಳ ಬಿಟ್ಟಿತ್ತು. ಆದರೆ, ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡು ತಿಂಗಳ ಮೇಲಾದರೂ, ಇನ್ನೂ ಒಟಿಟಿಯ ಸುದ್ದಿಯಿಲ್ಲ. ಈ ನಡುವೆ ಒಟಿಟಿಗೂ ಮುನ್ನವೇ ಕಿರುತೆರೆಗೆ ಆಗಮಿಸಲು ಸಜ್ಜಾಗಿದೆ ಈ ಸಿನಿಮಾ.
ಡಿಸೆಂಬರ್ 20ರಂದು ಬಿಡುಗಡೆ ಆಗಿದ್ದ ಯುಐ ಸಿನಿಮಾ, ಕಲೆಕ್ಷನ್ನಲ್ಲಿ ಹಿಂದೆ ಬಿದ್ದಿಲ್ಲ. ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಮಾಯಿಯನ್ನೇ ಮಾಡಿದೆ. ಅಂದಾಜು 35ರಿಂದ 40 ಪ್ಲಸ್ ಕೋಟಿ ಗಳಿಕೆ ಮಾಡಿದೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಚಿತ್ರತಂಡ ಮಾತ್ರ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಇದೇ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.