ಭಾರತ, ಜನವರಿ 30 -- ಕೇಂದ್ರ ಬಜೆಟ್‌ ಮಂಡನೆಗೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಜನರ ನಿರೀಕ್ಷೆಗಳು ಗರಿಗೆದರಿವೆ. ಪ್ರತಿ ಬಾರಿ ಬಜೆಟ್ ಮಂಡನೆ ವೇಳೆ ಪ್ರತಿಯೊಬ್ಬರೂ ಕಾತರತೆಯಿಂದ ತಮಗೆ ಅನುಕೂಲಕರ ಬದಲಾವಣೆಯನ್ನು ತರುತ್ತದೆ ಎಂದೇ ಕಾಯುತ್ತಾರೆ. 2025ರ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 8ನೇ ಬಜೆಟ್​​ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಕೂಡ ಹೌದು. ಸಹಜವಾದ ನಿರೀಕ್ಷೆಗಳು, ಸವಾಲುಗಳ ಮಧ್ಯೆ ಪ್ರಗತಿ ಹಾಗೂ ಸದೃಢತೆಗೆ ಪೂರಕ ಬಜೆಟ್ ಮಂಡನೆಯ ಜಾಣ್ಮೆಯ ಅಗತ್ಯ ಭಾರತದ ಆರ್ಥಿಕತೆಯ ಮುಂದಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಳವಣಿಗೆ ಮತ್ತು ಹಣಕಾಸಿನ ಶಿಸ್ತಿನ ನಡುವೆ ಸಮತೋಲನ ಕಾಯ್ದುಕೊಳ್ಳುವ ಕಠಿಣ ಜವಾಬ್ದಾರಿ ಹೊಂದಿದ್ದಾರೆ. ಜಿಡಿಪಿ ಬೆಳವಣಿಗೆಯು ಹಲವಾರು ತ್ರೈಮಾಸಿಕಗಳಲ್ಲಿ ಅತ್ಯಂತ ಕಡಿಮೆ ಹಂತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಸರ್ಕಾರ ಆರ್ಥಿಕ ಚೇತರಿಕೆಗೆ ಒತ್ತು ನೀಡುವ ನಿರೀಕ್ಷೆಯಿದೆ. ದುರ್ಬಲ ದೇಶೀಯ ಬೇಡಿಕೆ...