ಭಾರತ, ಜನವರಿ 29 -- Vasant Panchami 2025: ವಸಂತ ಪಂಚಮಿ ಹಬ್ಬವು ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ವಸಂತ ಪಂಚಮಿಯನ್ನು ಪ್ರತಿವರ್ಷ ಮಾಘ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ಆಚರಿಸಲಾಗುತ್ತದೆ. ಈ ವರ್ಷ, ವಂಸತ ಪಂಚಮಿಯನ್ನು ಕೆಲವು ಸ್ಥಳಗಳಲ್ಲಿ ಫೆಬ್ರವರಿ 2 ರಂದು ಮತ್ತು ಕೆಲವೊಂದು ಕಡೆಗಳಲ್ಲಿ ಫೆಬ್ರವರಿ 3 ರಂದು ಆಚರಿಸಲಾಗುತ್ತದೆ. ಈ ದಿನ ಸರಸ್ವತಿ ದೇವಿಯನ್ನು ಪೂಜಿಸಲಾಗುತ್ತದೆ. ಆದ್ದರಿಂದ ಇದನ್ನು ಸರಸ್ವತಿ ಪೂಜೆ ಎಂದೂ ಕರೆಯಲಾಗುತ್ತದೆ. ವಸಂತ ಪಂಚಮಿಯನ್ನು ಬಸವಂತ್ ಪಂಚಮಿ ಅಂತಲೂ ಕರೆಯಲಾಗುತ್ತದೆ. ಹಿಂದೂ ಧರ್ಮದ ನಂಬಿಕೆಗಳ ಪ್ರಕಾರ, ಸಂಗೀತ ಮತ್ತು ಕಲಿಕೆಯ ದೇವತೆಯಾದ ಸರಸ್ವತಿ ದೇವಿಯನ್ನು ಪೂಜಿಸುವುದರ ಜೊತೆಗೆ, ಈ ದಿನದಂದು ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ಜೀವನದಲ್ಲಿ ಸಂತೋಷ ಮತ್ತು ಸಂಪತ್ತು ಬರುತ್ತದೆ.

1. ಆಹಾರ: ವಸಂತ ಪಂಚಮಿಯಂದು ಆಹಾರವನ್ನು ದಾನ ಮಾಡುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ. ಈ ದಿನದಂದು ಬಡವರು ಮತ್ತು ನಿರ್ಗತಿಕರಿಗೆ ಆಹಾರ...