Bengaluru, ಮಾರ್ಚ್ 3 -- ಹಿಂದೂ ಧರ್ಮದಲ್ಲಿ ಜೀವನವು ಸಂತೋಷದಿಂದ ಕೂಡಿರಲು ಅನೇಕ ಸಲಹೆಗಳನ್ನು ನೀಡಲಾಗಿದೆ. ಅವುಗಳಲ್ಲಿ ವಾಸ್ತು ಶಾಸ್ತ್ರವು ಮನೆ ಹಾಗೂ ಜೀವನಕ್ಕೆ ಸಂಬಂಧಪಟ್ಟ ಅನೇಕ ವಿಷಯಗಳಿಗೆ ಸಲಹೆ ಮತ್ತು ಪರಿಹಾರಗಳನ್ನು ಸೂಚಿಸಿದೆ. ಜೀವನದಲ್ಲಿ ಸಂತೋಷ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ವಾಸ್ತು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯವೆಂದು ಅದರಲ್ಲಿ ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿಯೊಂದು ಕೋಣೆಯ ವಾಸ್ತು ದಿಕ್ಕನ್ನು ಅನುಸರಿಸಬೇಕು ಎಂದು ಹೇಳಲಾಗಿದೆ. ಅದರಂತೆ ವಸ್ತುಗಳನ್ನು ಸರಿಯಾದ ರೀತಿಯಲ್ಲಿ ಜೋಡಿಸುವ ಮೂಲಕ ಧನಾತ್ಮಕ ಶಕ್ತಿಯ ಹರಿವನ್ನು ಹೆಚ್ಚಿಸಬಹುದಾಗಿದೆ. ಇದರಿಂದಾಗಿ, ಜೀವನದಲ್ಲಿ ಸಮಸ್ಯೆಗಳು ಕ್ರಮೇಣ ಕಡಿಮೆಯಾಗಲು ಪ್ರಾರಂಭಿಸುತ್ತವೆ. ನಕಾರಾತ್ಮಕತೆ ದೂರವಾಗುತ್ತದೆ ಮತ್ತು ಕುಟುಂಬ ಜೀವನದಲ್ಲಿ ಸಂತೋಷದ ವಾತಾವರಣವಿರುತ್ತದೆ. ವಾಸ್ತು ಶಾಸ್ತ್ರದಲ್ಲಿ ಅಡುಗೆಮನೆಯಲ್ಲಿರುವ ವಸ್ತುಗಳನ್ನು ಸರಿಯಾದ ಸ್ಥಳದಲ್ಲಿ ಇಡಲು ಸಲಹೆ ನೀಡಲಾಗಿದೆ. ಹೀಗೆ ಮಾಡುವುದರಿಂದ ಜೀವನದಲ್ಲಿ ಸಮೃದ್ದಿ ...