ಭಾರತ, ಮಾರ್ಚ್ 3 -- ಜ್ಯೋತಿಷ್ಯದಲ್ಲಿ ವಾಸ್ತುಶಾಸ್ತ್ರಕ್ಕೆ ವಿಶೇಷ ನಿಯಮಗಳಿವೆ. ಸರಿಯಾದ ವಾಸ್ತು ನಿಯಮಗಳನ್ನು ಪಾಲಿಸುವ ಮೂಲಕ ನಾವು ಮನೆಯೊಳಗೆ ಧನಾತ್ಮಕ ಶಕ್ತಿಯನ್ನು ಆಹ್ವಾನಿಸಬಹುದು ಮತ್ತು ನಕಾರಾತ್ಮಕ ಶಕ್ತಿಯನ್ನು ತೊಡೆದುಹಾಕಬಹುದು. ಮನೆಯಲ್ಲಿ ಪ್ರತಿ ವಸ್ತುಗಳನ್ನು ಇಡಲು ಕೂಡ ವಾಸ್ತು ಶಾಸ್ತ್ರದಲ್ಲಿ ಕೆಲವು ನಿಯಮಗಳಿವೆ.

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್ ಇರುತ್ತದೆ. ಹಲವರು ಮನೆಯಿಂದಲೂ ಕೆಲಸ ಮಾಡುತ್ತಿದ್ದಾರೆ. ಇದರಿಂದ ನೀವು ಖಂಡಿತವಾಗಿಯೂ ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್ ಬಳಸುತ್ತಿರುತ್ತಾರೆ. ಆದರೆ ಬಹುತೇಕರು ಕಂಪ್ಯೂಟ್ ಅಥವಾ ಲ್ಯಾಪ್‌ಟಾಪ್ ವಿಚಾರದಲ್ಲಿ ವಾಸ್ತು ನಿಯಮಗಳನ್ನು ಕಡೆಗಣಿಸುತ್ತಾರೆ.

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್ ಅನ್ನು ಸರಿಯಾದ ದಿಕ್ಕಿನಲ್ಲಿ ಇಡುವುದು ಬಹಳ ಮುಖ್ಯವಾಗುತ್ತದೆ. ಇವುಗಳನ್ನು ಸರಿಯಾದ ದಿಕ್ಕಿನಲ್ಲಿ ಇಡುವುದರಿಂದ ಸಕಾರಾತ್ಮಕ ಶಕ್ತಿ ಸೃಷ್ಟಿಯಾಗುತ್ತದೆ. ಅದನ್ನು ಸರಿಯಾದ ದಿಕ್ಕಿನಲ್ಲ...