Bengaluru, ಏಪ್ರಿಲ್ 2 -- Waqf Amendment Bill: ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಟಾಪಟಿಯ ನಡುವೆ ವಕ್ಫ್ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಇಂದು (ಏಪ್ರಿಲ್ 2, ಬುಧವಾರ) ಮಂಡಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಮಂಡಿಸಿದರು. ಮಸೂದೆ ಕುರಿತ ಚರ್ಚೆಗೆ 8 ಗಂಟೆಗಳ ಕಾಲಾವಕಾಶವನ್ನು ನಿಗದಿಗೊಳಿಸಿದ್ದು, ಅಗತ್ಯಬಿದ್ದರೆ ಈ ಅವಧಿಯನ್ನು ವಿಸ್ತರಿಸುವ ಸಾಧ್ಯತೆ ಇದೆ. ಮುಸ್ಲಿಂ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಈ ಮಸೂದೆ ಮಂಡನೆಗೆ ಭಾರಿ ವಿರೋಧ ವ್ಯಕ್ತಪಡಿಸಿವೆ. ಮಸೂದೆಗೆ ಅನುಮೋದನೆ ಪಡೆಯುವ ಮುನ್ನ ಕಲಾಪದಲ್ಲಿ ಚರ್ಚೆಗಳನ್ನು ಮಾಡಲಾಗುತ್ತದೆ.

ವಿವಾದಾತ್ಮಕ ಮಸೂದೆಯು ವಕ್ಫ್ ಕಾಯ್ದೆ, 1995 ರಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಒಳಗೊಂಡಿದೆ. ಏನಿದು ವಕ್ಫ್ ತಿದ್ದುಪಡಿ ಮಸೂದೆ 2024 ಎಂಬುದರ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ವಕ್ಫ್ (ತಿದ್ದುಪಡಿ) ಮಸೂದೆ 2024 ರ ಉದ್ದೇಶವು ವಕ್ಫ್ ಆಸ್...