ಭಾರತ, ಏಪ್ರಿಲ್ 2 -- ನವದೆಹಲಿ: ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಂಡನೆಯು ಲೋಕಸಭೆಯಲ್ಲಿ ತೀವ್ರ ಕೋಲಾಹಲ ಎಬ್ಬಿಸಿದೆ. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸದನದಲ್ಲಿ ವಕ್ಫ್ ತಿದ್ದುಪಡಿ ಮಂಡಿಸಿದೆ. ಇಂಡಿಯಾ ಮೈತ್ರಿಕೂಟ ಬಣವು ಇದನ್ನು ಸಂವಿಧಾನ ಬಾಹಿರ ಎಂದು ಕರೆದಿದೆ. ಅಲ್ಲದೇ ತಿದ್ದುಪಡಿ ಮಸೂದೆ ಮಂಡನೆಯನ್ನು ವಿರೋಧಿಸಿ ಇಂಡಿಯಾ ಮೈತ್ರಿಕೂಟದ ಪ್ರತಿನಿಧಿಗಳು ನಿನ್ನೆ (ಏಪ್ರಿಲ್ 1) ಸದನದಿಂದ ಹೊರ ನಡೆದು ಸಭಾತ್ಯಾಗ ಮಾಡಿದ್ದರು.

ಈ ವಿಚಾರವಾಗಿ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಪ್ರಮುಖ ಪಕ್ಷಗಳ ನಾಯಕರನ್ನು ಒಳಗೊಂಡ ಲೋಕಸಭೆಯ ವ್ಯವಹಾರ ಸಲಹಾ ಸಮಿತಿ (ಬಿಎಸಿ) 8 ಗಂಟೆಗಳ ಚರ್ಚೆಗೆ ಒಪ್ಪಿಗೆ ನೀಡಿದೆ. ನಂತರವು ಸದನದ ಒಪ್ಪಿಗೆ ಪಡೆದು ಚರ್ಚೆ ಮುಂದುವರಿಯಲು ಅವಕಾಶ ಇದೆ ಎಂದಿದ್ದಾರೆ.

ಕೇಂದ್ರ ಸರ್ಕಾರವು ತಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ...