ಭಾರತ, ಏಪ್ರಿಲ್ 14 -- ಏಪ್ರಿಲ್‌ 14 ರಿಂದ ಏಪ್ರಿಲ್‌ 20 ವರೆಗಿನ ವಾರ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್.ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th April 2024 to 20th April Weekly Horoscope)

ದೃಢಸಂಕಲ್ಪದಿಂದಾಗಿ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಕುಟುಂಬದಲ್ಲಿ ಅನಾವಶ್ಯಕ ಗೊಂದಲದ ಸನ್ನಿವೇಶ ಎದುರಾಗುತ್...