Mysuru, ಫೆಬ್ರವರಿ 13 -- Wild Elephant Attack: ಜಮೀನಿಗೆ ನೀರು ಹಾಯಿಸಲು ಹೋಗಿ ಮೋಟರ್‌ಗೆ ಚಾಲನೆ ನೀಡುವ ಸಂದರ್ಭದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಯುವಕನೋರ್ವ ಆನೆ ದಾಳಿಗೆ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಹೆಡಿಯಾಲ ಉಪವಿಭಾಗದ ಮೊಳೆಯೂರು ವಲಯ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಮೃತಪಟ್ಟ ಯುವಕನನ್ನು ಅವಿನಾಶ್‌ ಎಂದು ಗುರುತಿಸಲಾಗಿದೆ. ಆಕ್ರೋಶಗೊಂಡ ಕುಟುಂಬಸ್ಥರು ಹಾಗು ಗ್ರಾಮದವರು ಶವವನ್ನು ಜಮೀನಿನಲ್ಲಿಯೇ ಇರಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಈ ಭಾಗದಲ್ಲಿ ಆನೆ ಸೇರಿದಂತೆ ವನ್ಯಜೀವಿಗಳ ಹಾವಳಿ ಮಿತಿ ಮೀರಿದ್ದರೂ ಅರಣ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Published by HT Digital Content Services with permission from HT Kannada....