ಭಾರತ, ಫೆಬ್ರವರಿ 4 -- ಪ್ರತಿ ವರ್ಷ ಫೆಬ್ರುವರಿ 4 ರಂದು ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಗುತ್ತದೆ. ಈ ದಿನವು ಕ್ಯಾನ್ಸರ್ ತಡೆಗಟ್ಟುವಿಕೆ, ಪತ್ತೆ ಹಚ್ಚುವಿಕೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ವಿಶ್ವ ಕ್ಯಾನ್ಸರ್ ದಿನವು ಜಗತ್ತಿನಾದ್ಯಂತ ವ್ಯಕ್ತಿಗಳು, ಸಮುದಾಯ ಮತ್ತು ಸಂಸ್ಥೆಗಳನ್ನು ಒಗ್ಗೂಡಿಸಿ ಕ್ಯಾನ್ಸರ್‌ನಿಂದ ಎದುರಾಗುವ ಸವಾಲುಗಳನ್ನು ಎತ್ತಿ ತೋರಿಸುತ್ತದೆ ಮತ್ತು ಅದನ್ನು ಎದುರಿಸಲು ಕ್ರಮಗಳನ್ನು ಪ್ರೇರೇಪಿಸುತ್ತದೆ.

ಕ್ಯಾನ್ಸರ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ಕ್ಯಾನ್ಸರ್‌ಗೆ ತುತ್ತಾದ ರೋಗಿಗಳು ಹಾಗೂ ಕುಟುಂಬದವರನ್ನು ಬೆಂಬಲಿಸಲು ವಿಶ್ವದಾದ್ಯಂತ ಕಾರ್ಯಕ್ರಮಗಳು, ಅಭಿಯಾನಗಳು ಹಾಗೂ ಚಟುವಟಿಕೆಗಳನ್ನು ಆಯೋಜಿಸುವುದು ಈ ದಿನದ ಆಚರಣೆಯ ಮುಖ್ಯ ಉದ್ದೇಶ.

ವಿಶ್ವ ಆರೋಗ್ಯ ಸಂಸ್ಥೆಯು ಜೀವನಶೈಲಿಯಲ್ಲಿ ಈ ಕೆಲವು ಬದಲಾವಣೆಗಳನ್ನು ತಪ್ಪದೇ ಅನುಸರಿಸುವ ಮೂಲಕ ಶೇ 30 ರಿಂದ 50 ರಷ್ಟು ಕ್ಯಾನ್ಸರ್ ಅಪಾಯವನ್ನು ತಡೆಗಟ್ಟಲು ಸಾಧ್ಯವಿದೆ ಎಂಬುದನ್ನು ನಿರೂಪಿಸಿದೆ. ಹಾಗಾದರೆ ಕ್ಯ...