Bengaluru, ಫೆಬ್ರವರಿ 4 -- World cancer day 2025: ಜಾಗತಿಕವಾಗಿ ಹಲವು ಮಂದಿಯ ಬಲಿ ಪಡೆಯುತ್ತಿರುವ ಮತ್ತು ವಿವಿಧ ರೀತಿಯಲ್ಲಿ ಕಾಣಿಸಿಕೊಂಡು ತೊಂದರೆ ನೀಡುವ ಕ್ಯಾನ್ಸರ್‌, ಆಧುನಿಕ ಜೀವನಶೈಲಿಯ ಕೊಡುಗೆ ಎನ್ನಲು ಅಡ್ಡಿಯಿಲ್ಲ. ಜನರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು, ಅದರ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಚಿಕಿತ್ಸಾ ವಿಧಾನ, ಸಾಧ್ಯತೆಗಳು ಮತ್ತು ಅದರ ಪರಿಣಾಮವನ್ನು ಕಡಿಮೆ ಮಾಡಲು ಜಾಗತಿಕವಾಗಿ ಪ್ರತಿ ವರ್ಷ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷವೂ ಭಾರತ ಮಾತ್ರವಲ್ಲದೆ, ಜಾಗತಿಕವಾಗಿ ಲಕ್ಷಾಂತರ ಜನರು ಕ್ಯಾನ್ಸರ್ ಕಾಯಿಲೆಗೆ ಸಿಲುಕಿ ಬಳಲುತ್ತಿದ್ದಾರೆ. ಆಧುನಿಕ ಜೀವನಶೈಲಿಯ ಬದಲಾವಣೆಗಳು, ಸ್ಕ್ರೀನಿಂಗ್ ಕಾರ್ಯಕ್ರಮ ಮತ್ತು ಅತ್ಯಾಧುನಿಕ ವಿಧಾನದ ಚಿಕಿತ್ಸೆಯ ಪ್ರಗತಿಯ ಬಗ್ಗೆ ಜನರಿಗೆ ಅರಿವು ಮೂಡಿಸಲು ವಿಶ್ವ ಕ್ಯಾನ್ಸರ್ ದಿನವು ಸಹಕಾರಿಯಾಗಿದೆ.

ವಿಶ್ವ ಕ್ಯಾನ್ಸರ್ ದಿನ ಎಂದು ಫೆ. 4ರಂದು ಆಚರಿಸುವ ಮುಖ್ಯ ಉದ್ದೇಶವೆಂದರೆ, ಜಾಗತಿಕವಾಗಿ ಕ್ಯಾನ್ಸರ್ ಸಂಬ...