ಭಾರತ, ಮಾರ್ಚ್ 22 -- ನೀರಿನ ಮಹತ್ವವನ್ನು ಜಗತ್ತಿಗೆ ತಿಳಿಸಲು ಮತ್ತು ಜಾಗತಿಕ ನೀರಿನ ಬಿಕ್ಕಟ್ಟಿನ ಬಗ್ಗೆ ಜಾಗೃತಿ ಮೂಡಿಸಲು, ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ.

ವಿಶ್ವಸಂಸ್ಥೆಯ ವೆಬ್‌ಸೈಟ್‌ನ ಪ್ರಕಾರ, ಈ ಆಚರಣೆಯ ಹಿಂದಿನ ಕಲ್ಪನೆಯು "ಸುಸ್ಥಿರ ಅಭಿವೃದ್ಧಿ ಗುರಿ (SDG) 6: 2030 ರ ವೇಳೆಗೆ ಎಲ್ಲರಿಗೂ ನೀರು ಮತ್ತು ನೈರ್ಮಲ್ಯದ ಸಾಧನೆಯನ್ನು ಬೆಂಬಲ ನೀಡುವುದಾಗಿದೆ".

ಸಿಹಿನೀರಿನ ಸಂಪನ್ಮೂಲಗಳನ್ನು ಸುಸ್ಥಿರವಾಗಿ ನಿರ್ವಹಿಸಲು ಮತ್ತು ನೀರಿನ ಮಾಲಿನ್ಯ, ನೀರಿನ ಕೊರತೆ, ಅಸಮರ್ಪಕ ನೀರು ಮತ್ತು ನೈರ್ಮಲ್ಯದ ಕೊರತೆಯಂತಹ ನೀರಿನ ಸಂಬಂಧಿತ ಸಮಸ್ಯೆಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಮತ್ತು ಬದಲಾವಣೆಯನ್ನು ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಜನರನ್ನು ಜಾಗೃತಗೊಳಿಸುವುದು ಮತ್ತು ಪ್ರೇರೇಪಿಸುವುದು ಈ ಆಚರಣೆಯ ಮುಖ್ಯ ಉದ್ದೇಶ.

ಇತಿಹಾಸ: ವಿಶ್ವ ಜಲ ದಿನವನ್ನು ಆಚರಿಸುವ ನಿರ್ಣಯವನ್ನು ಮೊದಲು ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯು 1992ರ ಡಿಸೆಂಬರ್ 22 ರಂದು ಅಂಗೀಕರಿಸಿತು...