ಭಾರತ, ಫೆಬ್ರವರಿ 26 -- ಡಬ್ಲ್ಯುಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ವನಿತೆಯರ ತಂಡ ಗೆಲುವಿನ ಓಟ ಮುಂದುವರೆಸಿದೆ. ಯುಪಿ ವಾರಿಯರ್ಸ್‌ ವಿರುದ್ಧದ ಪಂದ್ಯದಲ್ಲೂ ಅಬ್ಬರಿಸಿದ ಹರ್ಮನ್‌ಪ್ರೀತ್‌ ಕೌರ್‌ ಪಡೆ, 8 ವಿಕೆಟ್‌ಗಳ ಸುಲಭ ಜಯ ಸಾಧಿಸಿದೆ. ಇದರೊಂದಿಗೆ ವಿಮೆನ್ಸ್‌ ಪ್ರೀಮಿಯರ್‌ ಲೀಗ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಟೂರ್ನಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ನ್ಯಾಟ್‌ ಸಿವರ್‌ ಬ್ರಂಟ್‌, ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಎರಡರಲ್ಲೂ ಅಬ್ಬರಿಸಿ ಪಂದ್ಯಶ್ರೇಷ್ಠ ಪ್ರದರ್ಶನ ನೀಡಿದರು.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಯುಪಿ, 9 ವಿಕೆಟ್‌ ಕಳೆದುಕೊಂಡು 142 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್‌ ನಡೆಸಿದ ಮುಂಬೈ 17 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು 143 ರನ್‌ ಗಳಿಸಿತು.

ಯುಪಿ ಪರ ಗ್ರೇಸ್ ಹ್ಯಾರಿಸ್ 26 ಎಸೆತಗಳಲ್ಲಿ 45 ರನ್ ಬಾರಿಸಿದರು. ಇವರು ಆರು ಬೌಂಡರಿ ಮತ್ತು ಎರಡು ಸ್ಫೋಟಕ ಸಿಕ್ಸರ್ ಸಿಡಿಸಿ ಔಟಾದರು. ವೃಂದಾ ದಿನೇಶ್ (33) ಅ...