ಭಾರತ, ಮಾರ್ಚ್ 26 -- Yatnal Expulsion: ಕರ್ನಾಟಕದ ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ಪಕ್ಷದ ನಾಯಕ ಓಂಪಾಠಕ್ ತಿಳಿಸಿದ್ದಾರೆ. ಕಳೆದ ಎರಡು ವರ್ಷದಿಂದ ಪಕ್ಷದ ವಿರುದ್ದವೇ ಚಟುವಟಿಕೆಯಲ್ಲಿ ನಿರತರಾಗಿದ್ದ ಯತ್ನಾಳ್ ಅವರು ಹಾಲಿ ಅಧ್ಯಕ್ಷ ವಿಜಯೇಂದ್ರ ಹಾಗೂ ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ದವೇ ಬಹಿರಂಗ ಹೇಳಿಕೆ ನೀಡುತ್ತದ್ದರು. ಅಲ್ಲದೇ ಶಾಸಕರಾದ ರಮೇಶ್ ಜಾರಕಿಹೊಳಿ, ಬಿ.ಪಿ.ಹರೀಶ್, ಮಾಜಿ ಸಚಿವರಾದ ಕುಮಾರ ಬಂಗಾರಪ್ಪ ಸಹಿತ ಕೆಲ ನಾಯಕರು ಗುಂಪು ರಚಿಸಿಕೊಂಡು ಬಂಡಾಯ ಸಾರಿದ್ದರು. ಕೆಲ ದಿನಗಳ ಹಿಂದೆ ಯತ್ನಾಳ್‌ಗೆ ನೊಟೀಸ್ ಜಾರಿ ಮಾಡಲಾಗಿತ್ತು. ಈಗ ಅವರನ್ನು ಪಕ್ಷದಿಂದ ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.